ಸತತ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವುದೇ ನನ್ನ ಪರಮಗುರಿ; ಸಂಸದ ಅಣ್ಣಾಸಾಹೇಬ್ ಜೊಲ್ಲೆ

ಚಿಕ್ಕೋಡಿ: ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ಸತತ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವುದೇ ನನ್ನ ಪರಮಗುರಿ. ಹೀಗಾಗಿ ಪ್ರತಿ ವಲಯದಲ್ಲೂ ಹಂತಹಂತವಾಗಿ ಪ್ರಗತಿ ಮಾಡುತ್ತಿದ್ದು, ಕ್ಷೇತ್ರದ ಏಳಿಗೆಗಾಗಿ ಶ್ರಮವಹಿಸುತ್ತಿದ್ದೇನೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹೇಳಿದ್ದಾರೆ. ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕಾಗವಾಡ ಮತಕ್ಷೇತ್ರದ ಅನಂತಪೂರ ಗ್ರಾಮದಲ್ಲಿ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮಂಜೂರಾದ 5 ಲಕ್ಷ ರೂ. ವೆಚ್ಚದಲ್ಲಿ ಶ್ರೀ ಅಂಬಾಭವಾನಿ ದೇವಸ್ಥಾನದ ಹತ್ತಿರ ಸಾಂಸ್ಕೃತಿಕ ಭವನದ ನಿರ್ಮಾಣ ಕಾಮಗಾರಿಗೆ ಸಂಸದರ ಅನುಪಸ್ಥಿತಿಯಲ್ಲಿ ಊರಿನ ಮುಖಂಡರು ಹಾಗೂ ಕಾರ್ಯಕರ್ತರು ಒಡಗೂಡಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದ್ದಾರೆ.

promotions

promotions

Read More Articles