ನೂತನ ಬಸ್ ನಿಲ್ದಾಣಕ್ಕೆ ಚಾಲನೆ ನೀಡಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ
- 15 Jan 2024 , 12:35 AM
- Belagavi
- 107
ಸವದತ್ತಿ: ಪಟ್ಟಣದಲ್ಲಿ ವಿಶೇಷ ಮೂಲಭೂತ ಸೌಲಭ್ಯಗಳ ನೂತನ ಬಸ್ ನಿಲ್ದಾಣಕ್ಕೆ ಇಂದು ಭೂಮಿ ಪೂಜೆ ನೆರವೇರಿಸಲಾಯಿತು.1 ಎಕರೆ 35 ಗುಂಟೆ ವಿಸ್ತೀರ್ಣದ ಸ್ಥಳದಲ್ಲಿ 4 ಕೋಟಿ ರೂ.

ಇಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಯವರು ಸವದತ್ತಿಯ ಶಿಥಿಲಾವಸ್ಥೆಯ ಹಳೆಯ ಬಸ್ ನಿಲ್ದಾಣವನ್ನು ತೆರವುಗೊಳಿಸಿ ಭೂಮಿ ಪೂಜೆ ಮಾಡಿ ವಿಶೇಷ ಅನುದಾನದಲ್ಲಿ ಬಸ್ ನಿಲ್ದಾಣದ ಕಾಮಗಾರಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ,ಸವದತ್ತಿ ಯಲ್ಲಮ್ಮಾ ಪುರಸಭೆಯ ಮಾಜಿ ಅಧ್ಯಕ್ಷ ರಾಜಶೇಕರ ಕಾರದಗಿ ಸೇರಿದಂತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.










