ಕನ್ನಡ ಬರೀ ಭಾಷೆಯಲ್ಲ, ನಮ್ಮ ಸಂಸ್ಕೃತಿಯ ಪ್ರತೀ ಸಚಿವೆ ಶಶಿಕಲಾ ಜೊಲ್ಲೆ

ವಿಜಯಪುರ: ಜಿಲ್ಲೆಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯದ ಕ್ರೀಡಾಂಗಣದಲ್ಲಿ, ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ 65ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಭುವನೇಶ್ವರಿ ತಾಯಿಗೆ ಪುಷ್ಪನಮನ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದರು.

promotions
logintomyvoice

ನಂತರ ಮಾತನಾಡಿದ ಅವರು, ಕನ್ನಡ ಬರೀ ಭಾಷೆಯಲ್ಲ, ಕರ್ನಾಟಕ ಬರೀ ನೆಲವಲ್ಲ. ಅದೊಂದು ಭಾವನಾತ್ಮಕ ಸಂಬAಧ ಹಾಗೂ ಎಂದೂ ಬಿಡಿಸಲಾರದ ಬಾಂಧವ್ಯ. ಹೀಗಾಗಿ ನಮ್ಮ ಹೆಮ್ಮೆಯ ಭಾಷೆಯನ್ನು ಹೆಚ್ಚಾಗಿ ಬಳಸಿದಾಗ ಮಾತ್ರ ಅದು ಜೀವಂತವಾಗಿರಲು ಸಾಧ್ಯ ಎಂದು ಸಂದೇಶ ನೀಡಿದರು. ಇಂತಹ ಸುಸಂದರ್ಭದಲ್ಲಿ ಮಹಾನ್ ಚೇತನರನ್ನು ಸ್ಮರಿಸುತ್ತಾ, ವರ್ತಮಾನ ಕಾಲದ ಸಾಧಕರು ಹಾಗೂ ನಮ್ಮೆಲ್ಲರ ಹಿತಕ್ಕಾಗಿ ಶ್ರಮಿಸುತ್ತಿರುವವರನ್ನು ಸನ್ಮಾನ ಮಾಡಿರುವುದು ನನ್ನ ಪುಣ್ಯ ಎಂದರು. ಬಳಿಕ ಕೊರೊನಾ ವಾರಿಯರ್‌ಗಳಾದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪೌರ ಕಾರ್ಮಿಕರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು. ಇದೇ ವೇಳೆ ಎಸ್‌ಎಸ್‌ಎಲ್‌ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದು ಜಿಲ್ಲೆಗೆ ಕೀರ್ತಿ ತಂದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಹಾಗೂ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.

promotions
logintomyvoice

ಈ ಸಂದರ್ಭದಲ್ಲಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ತಿನ ಸದಸ್ಯ ಅರುಣ ಶಹಾಪುರ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ್ ರೆಡ್ಡಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ಶ್ರೀಮತಿ ಸುಜಾತಾ ಕಳ್ಳಿಮನಿ ಹಾಗೂ ಜನಪ್ರತಿನಿಧಿಗಳು, ಗಣ್ಯರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More Articles