ನೂತನ ಗ್ರಾಮ ಪಂಚಾಯತ್ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ
- 14 Jan 2024 , 10:18 PM
- Belagavi
- 167
ನಿಪ್ಪಾಣಿ: ತಾಲೂಕಿನ ಶೇಂಡೂರ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಮಂಜೂರಾದ ಸುಮಾರು 16.25 ಲಕ್ಷ ರೂ. ಗಳ ಮೊತ್ತದಲ್ಲಿ ನೂತನ ಪಂಚಾಯಿತಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಚಿವೆ ಶಶಿಕಲಾ ಜೊಲ್ಲೆ ಭೂಮಿ ಪೂಜೆ ನೆರವೇರಿಸಿದರು. ನಂತರ ಗ್ರಾಮಸ್ಥರನ್ನು ಉದ್ದೇಶಿಸಿಮ ಮಾತನಾಡಿದ ಅವರು, ವಿಕೇಂದ್ರೀಕರಣ ವ್ಯವಸ್ಥೆಯ ಭಾಗವಾಗಿರುವ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳು ಹಾಗೂ ಜನರ ನಡುವಿನ ಸಂಪರ್ಕದ ಕೊಂಡಿಯಾಗಿದೆ.

ಹೀಗಾಗಿ ಪ್ರತಿಯೊಬ್ಬ ಪ್ರಜೆ ಕೂಡ ಗ್ರಾಮದ ಸಮಸ್ಯೆಯನ್ನು ಪಂಚಾಯತ್ ಗಮನಕ್ಕೆ ತಂದಾಗ ಅಭಿವೃದ್ಧಿ ಕಾರ್ಯಕ್ಕೆ ಸಲೀಸಲಾಗುತ್ತದೆ. ಶೀಘ್ರದಲ್ಲಿ ಈ ಗ್ರಾಮ ಪಂಚಾಯತ್ ಕಟ್ಟಡ ಕಾಮಗಾರಿ ಪೂರ್ಣಗೊಂಡು ನಿಮ್ಮ ಸೇವೆಗೆ ಸದಾ ಸಿದ್ಧವಿರುತ್ತದೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಊರಿನ ಗಣ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.











