ಬಿಜೆಪಿ ತೆಕ್ಕೆಗೆ ಕಿತ್ತೂರು ಪಟ್ಟಣ ಪಂಚಾಯತ್

ಕಿತ್ತೂರು: ಪಟ್ಟಣ ಪಂಚಾಯತ್ ಅಧ್ಯಕ್ಷ - ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಹನಮಂತ ಲಂಗೋಟಿ ಅಧ್ಯಕ್ಷರಾಗಿ, ಶೋಭಾ ಕೃಷ್ಣ ಧರಸಿ ಉಪಾಧ್ಯಕ್ಷರಾಗಿ ಆಯ್ಕೆಯಾದರು. ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರಿಗೆ ಕಿತ್ತೂರು ಮತ ಕ್ಷೇತ್ರದ ಶಾಸಕ ಮಾಂತೇಶ ದೊಡ್ಡಗೌಡರ, ಉ.ಕ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮಂಡಳ ಅಧ್ಯಕ್ಷ ಬಸವರಾಜ ಪರವನ್ನವರ, ಚಿನ್ನಪ್ಪ ಮುತ್ನಾಳ, ಅಪ್ಪಣ್ಣ ಪಾಗಾದ, ಶ್ರೀಕರ ಕುಲಕರ್ಣಿ, ಉಳವಪ್ಪ ಉಳ್ಳಾಗಡ್ಡಿ, ಬಸನಗೌಡ ಸಿದ್ರಾಮನಿ, ಸಂದೀಪ್ ದೇಶಪಾಂಡೆ, ಪಟ್ಟಣ ಪಂಚಾಯತ್ ಸದಸ್ಯರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

promotions

promotions

Read More Articles