ಪ್ರಗತಿ ಪರ ಹಾಗೂ ಜನಪರ ಕಾರ್ಯಗಳೇ ಚುನಾಯಿತ ಜನಪ್ರತಿನಿಧಿಗಳ ಪ್ರಮುಖ ಗುರಿ, ಸಂಸದ ಅಣ್ಣಾಸಾಹೇಬ ಜೊಲ್ಲೆ

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಐನಾಪುರ ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಭಾರತೀಯ ಜನತಾ ಪಕ್ಷದ ತಮ್ಮಣ್ಣಾ ಪಾರಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಗೀತಾ ಕೆಂಗಾರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸತ್ಕರಿಸಿ ಮಾತನಾಡಿದ ಸಂಸದ ಅಣ್ಣಾಸಾಹೇಬ ಜೊಲ್ಲೆ ಪ್ರಗತಿ ಪರ ಹಾಗೂ ಜನಪರ ಕಾರ್ಯಗಳೇ ಚುನಾಯಿತ ಜನಪ್ರತಿನಿಧಿಗಳ ಪ್ರಮುಖ ಗುರಿಯಾಗಬೇಕು. ಈ ನಿಟ್ಟಿನಲ್ಲಿ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸಿದಾಗ ಪ್ರಜೆಗಳಿಗೆ ಕೊಟ್ಟ ಭರವಸೆಯನ್ನು ಈಡೇರಿಸಲು ಸಾಧ್ಯವಾಗುತ್ತದೆ ಎಂದು ಕಿವಿಮಾತು ಹೇಳಿವುದರ ಜೊತೆಗೆ ನೂತನವಾಗಿ ಆಯ್ಕೆಯಾದ ನಾಯಕರು ಏಕತೆಯಿಂದ ಜನಪರ ಕಾರ್ಯಗಳನ್ನು ಮಾಡಿ, ಅಭಿವೃದ್ಧಿಯ ಪಥದತ್ತ ಸಾಗಿ ಎಂದು ಸಂದೇಶ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಮೀಳಾ ದೇಶಪಾಂಡೆ, ಯುವನಾಯಕ ಶ್ರೀನಿವಾಸ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ನಿಂಗಪ್ಪ ಕೋಕಲೆ, ಪಟ್ಟಣ ಪಂಚಾಯಿತಿ ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

promotions

promotions

Read More Articles