ಸಚಿವೆ ಶಶಿಕಲಾ ಜೊಲ್ಲೆ ಅವರಿಂದ ಶುದ್ಧ ಕುಡಿಯುವ ನೀರಿನ ಜಲಸಂಗ್ರಹಾಲಯದ ಉದ್ಘಾಟನೆ

ನಿಪ್ಪಾಣಿ: ಮತಕ್ಷೇತ್ರದ ಆಡಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯಿಂದ ಮಂಜೂರಾದ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ, 1 ಲಕ್ಷ ಲೀಟರ್ ನೀರಿನ ಸಂಗ್ರಹಣೆಯ ಸಾಮರ್ಥ್ಯವಿರುವ ಮೇಲ್ಮಟ್ಟದ ಜಲಸಂಗ್ರಹಾಲಯದ ಉದ್ಘಾಟನೆಯನ್ನು ಸಚಿವೆ ಶಶಿಕಲಾ ಜೊಲ್ಲೆ ಬುಧವಾರ ನೆರೆವೇರಿಸಿದರು. ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ಪ್ರಜೆಗೂ ಶುದ್ಧ ಕುಡಿಯುವ ನೀರು ಹಾಗೂ ರಾಜ್ಯವನ್ನು ಜಲಸುಭದ್ರ ಮಾಡುವತ್ತ ನಮ್ಮ ಸರ್ಕಾರ ಹೆಜ್ಜೆಯಿಡುತ್ತಿದೆ. ಹೀಗಾಗಿ ಪ್ರಜಾಬಂಧುಗಳ ಸಧೃಡ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರು ಒದಗಿಸುವುದು ನನ್ನ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ವರೂ ಶುದ್ಧ ಕುಡಿಯವ ನೀರನ್ನು ಬಳಸಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳೋಣ ಎಂದು ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಊರಿನ ಗಣ್ಯರು, ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

promotions

promotions

Read More Articles