ವೀರಶೈವ-ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರಕ್ಕೆ ಸ್ವಾಗತಾರ್ಹ: ಶಿವಲಿಂಗಯ್ಯ ಅಲ್ಲಯ್ಯನವರಮಠ
- 15 Jan 2024 , 3:24 AM
- Belagavi
- 128
ಬೆಳಗಾವಿ: ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಐತಿಹಾಸಿಕ ನಿರ್ಧಾರ ಘೋಷಣೆ ಮಾಡಿದ್ದು ಸ್ವಾಗತಾರ್ಹಗಿದೆ ಎಂದು ವೀರಶೈವ ಲಿಂಗಾಯತ ಯುವ ಸಮಿತಿ ಅಧ್ಯಕ್ಷ ಶಿವಲಿಂಗಯ್ಯ ಅಲ್ಲಯ್ಯನವರಮಠ ಹೇಳಿದ್ದಾರೆ. ಮಂಗಳವಾರ ಸುದ್ದಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಧರ್ಮದ ಅಭಿವೃದ್ಧಿ ನಿಗಮ ರಚನೆಯಾಗಬೇಕೆಂದು ಬಹುವರ್ಷಗಳ ಬೇಡಿಕೆಯಾಗಿತ್ತು. ಅದರಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಈ ಐತಿಹಾಸಿಕ ನಿರ್ಣಯ ತೆಗೆದುಕೊಂಡಿರುವುದು ತುಂಬಾ ಸಂತಸ ತಂದಿದೆ. ಅಲ್ಲದೆ ವೀರಶೈವ ಲಿಂಗಾಯತ ಸಮುದಾಯದ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೆ ಈ ನಿಗಮ ಹೆಚ್ಚಿನ ಆಧ್ಯತೆ ನೀಡಿ ಅವರಿಗೆ ಹೆಚ್ಚಿನ ರೀತಿಯಲ್ಲಿ ಸಹಕಾರಿಯಾಗಲಿ ಎಂದು ಶುಭಹಾರೈಸಿದರು.












