ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಗೆ ಮತ್ತೆ ಶಾಕ್ ನೀಡಿದ ಸಿಬಿಐ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತೆ ಸಿಬಿಐ ಶಾಕ್ ನೀಡಿದೆ. ಪುತ್ರಿ ಐಶ್ವರ್ಯಾಳ ನಿಶ್ಚಿತಾರ್ಥದ ಸಂಭ್ರಮ ಮುಗಿದ ನಂತರ ಸಿಬಿಐನಿಂದ ನೋಟಿಸ್ ಬಂದಿದೆ. ಹಣ ವರ್ಗಾವಣೆ ಪ್ರಕರಣದಲ್ಲಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಜಾರಿ ಮಾಡಿದೆ ನವೆಂಬರ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ. ಅಕ್ಟೋಬರ್ 5 ರಂದು ಸಿಬಿಐ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಸಿಕ್ಕ ದಾಖಲೆಗಳ ಆಧಾರದ ಮೇಲೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸ್ತಿದ್ದಾರೆ. ಇದೀಗ ಸಿಬಿಐ ದಾಳಿಯ ಬಳಿಕ ಇದೇ ಮೊದಲ ಬಾರಿಗೆ ಸಿಬಿಐ ಡಿಕೆ ಶಿವಕುಮಾರ್‌ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ನವೆಂಬರ್ 23 ರಕ್ಕೆ ದೆಹಲಿಯ ಸಿಬಿಐ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಮಾಡಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಬಿಐ 23 ಕ್ಕೆ ಹಾಜರಾಗುವಂತೆ ಹೇಳಿದ್ದಾರೆ. ಆದರೆ ನಾಳೆಯಿಂದ ಉತ್ತರ ಕರ್ನಾಟಕ ಪ್ರವಾಸ ಆಯೋಜಿಸಲಾಗಿದೆ. ಆದ್ದರಿಂದ ಸಿಬಿಐ ಅಧಿಕಾರಿಗೆ ವಿಚಾರಣೆಗಾಗಿ 25 ಕ್ಕೆ ಹಾಜರಾಗುತ್ತೇನೆ ಅಂತ ಮನವಿ ಮಾಡಿದ್ದೇನೆ ಅದಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ ಎಂದರು.

promotions

promotions

Read More Articles