ಇಂದು ನಟ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಸರ್ಜಾ ಅವರು ತೀವ್ರ ಹೃದಯಾಘಾತದಿಂದ ಜಯನಗರದ ಅಪೊಲೊ ಸಾಗರ್ ಆಸ್ಪತ್ರೆಯಲ್ಲಿ ನಿನ್ನೆ ಕೊನೆಯುಸಿರುಳೆದಿದ್ದರು. ಚಿರಂಜೀವಿ ಅಂತ್ಯಕ್ರಿಯೆ ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಇಂದು ಬೆಳಗ್ಗೆ 12 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ಮಾಡಿ ಕೊಡಲಾಗಿದೆ. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದರೆ ಅಂತಿಮ ದರ್ಶನದ ಸಮಯವನ್ನು ಮುಂದೂಡುವ ಸಾಧ್ಯತೆ ಇದೆ. ಮಧ್ಯಾಹ್ನ 2 ಗಂಟೆ ಸುಮಾರಿಗೆ ಕನಕಪುರ ರಸ್ತೆಯ ನೆಲಗುಳಿಯಲ್ಲಿ ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇದಕ್ಕೆ ಅರ್ಜುನ್ ಸರ್ಜಾ ಮತ್ತು ಕುಟುಂಬದವರ ಸಮ್ಮತಿ ಕೂಡ ಇದೆ ಎಂಬ ಮಾಹಿತಿಗಳು ಲಭ್ಯವಾಗಿವೆ.

promotions

Read More Articles