ನೀರಾವರಿ ಇಲಾಖೆಯ ವಿರುದ್ಧ ಆಕ್ರೋಶಗೊಂಡ ರೈತರ ಪ್ರತಿಭಟನೆ
- Prasad Kambar
- 11 Mar 2024 , 2:19 PM
- Belagavi
- 0
ಬೆಳಗಾವಿ: ಬೆಳಗಾವಿಯಲ್ಲಿ ಹಿಡಕಲ್ ಡ್ಯಾಮ್ ಹಿನ್ನೀರಿಗೆ ಜಮೀನು ಕಳೆದುಕೊಂಡ ರೈತರಿಗೆ ನೀರಾವರಿ ಇಲಾಖೆಯಿಂದ ಪರಿಹಾರ ಕೊಡುವಂತೆ ಆಗ್ರಹಿಸಿ ಇಲ್ಲಿನ ನೂರಾರು ರೈತರು ಸೋಮವಾರ ಚನ್ನಮ್ಮ ವೃತ್ತದಲ್ಲಿ ಎತ್ತಿನ ಗಾಡಿಯೊಂದಿಗೆ ಬೃಹತ್ ಪ್ರತಿಭಟನೆ ನಡೆಸಿ ನೀರಾವರಿ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.


ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಮಾಸ್ತಿಹೊಳಿ, ಗುಡನಟ್ಟಿ ಬೀರಹೊಳ್ಳಿ ಗ್ರಾಮದ ರೈತರು ಹಲವಾರು ಬಾರಿ ಹೋರಾಟ ಮಾಡಿದರೂ ನೀರಾವರಿ ಇಲಾಖೆ ಪರಿಹಾರ ಕೊಟ್ಟಿಲ್ಲ ಎಂದು ಹಿಡಕಲ್ ಡ್ಯಾಮ್ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.
396 ಎಕರೆ ಜಮೀನಿಗೆ ಪರಿಹಾರ ನೀಡುವಂತೆ ಕಚೇರಿಯಿಂದ ಕಚೇರಿಗೆ ಅಲೆದಾಡಿದರೂ ಎರಡು ವರ್ಷಗಳ ಹಿಂದೆಯೇ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ ನೀಡಿದರೂ ಇಲ್ಲಿಯವರೆಗೂ ಪರಿಹಾರ ನೀಡಿಲ್ಲ ಎಂದ ಹರಿಹಾಯ್ದರು.










