ಲಾರಿ, ಬೈಕ್ ಮುಖಾಮುಖಿ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
- shivaraj B
- 11 Oct 2024 , 1:03 PM
- Chikodi
- 347
ಚಿಕ್ಕೋಡಿ : ಬೈಕ್ ಹಾಗೂ ಲಾರಿ ಮಧ್ಯ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದಲ್ಲಿ ನಡೆದಿದೆ.
ಬೈಕ್ ಸವಾರನನ್ನು ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಹಲ್ಕರ್ಣಿ ಗ್ರಾಮದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ನಿವಾಸಿ ಎನ್ನಲಾಗ್ತಿದೆ.
ಅಪಘಾತ ಜರಗುತ್ತಿದ್ದಂತೆ ಲಾರಿ ಚಾಲಕ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.