ಕೈ ನಾಲ್ಕನೇ ಗ್ಯಾರಂಟಿ ಘೋಷಣೆ ಮಾಡಿದ ರಾಗಾ

ಬೆಳಗಾವಿ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ರಚನೆಯಾದರೆ ನಿರುದ್ಯೋಗ ಯುವ ಪದವೀಧರರಿಗೆ  ಮಾಸಿಕ‌ 3,000 ರೂ, ಡಿಪ್ಲೊಮಾ ಪದವಿಧರರಿಗೆ 1,500 ರೂ. ಮಾಸಿಕ ಹಣವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದರು.
ಸೋಮವಾರ ನಗರದ ಸಿಪಿಎಡ್ ಮೈದಾನದಲ್ಲಿ ಯುವ ಕ್ರಾಂತಿ ಸಮಾವೇಶದಲ್ಲಿ ಘೋಷಣೆ ಮಾಡಿದರು. ರಾಜ್ಯದ ಯುವಕರನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿ ನಿರುದ್ಯೋಗ ಯುವಕರಿಗೆ 3,000 ರಿಂದ 1,500 ರೂ. ನೀಡಲಾಗುವುದು.ಅಷ್ಟೆ ಅಲ್ಲ, ಉದ್ಯೋಗ ಕಲ್ಪಿಸುವ ಯೋಜನೆಯನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
 ಕೆಲ ತಿಂಗಳ‌ ಹಿಂದೆ ಭಾರತ್ ಜೋಡೋ ಪಾದಯಾತ್ರೆ ನಡೆಸಿದ ಸಂದರ್ಭದಲ್ಲಿ ಕರ್ನಾಟಕದ ಜನರು ಪೂರ್ಣ ಶಕ್ತಿ ಕೊಟ್ಟು ಯಶಸ್ವಿಯಾಗಲು ಸಹಕರಿಸಿದ್ದಕ್ಕೆ ಧನ್ಯವಾದ ತಿಳಿಸಿದರು.

promotions

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ರಾಜ್ಯದಲ್ಲಿ ಈಗ ಚುನಾವಣೆ ಬರುತ್ತಿದೆ. ಇದು ಕರ್ನಾಟಕಕ್ಕೆ ಹಾಗೂ ದೇಶಕ್ಕೆ ಒಂದು ಸಂದೇಶ ಕೊಡುವ ಚುನಾವಣೆ. ಅದಕ್ಕಾಗಿ ನಾವೆಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕಿದೆ. ಯುವಕರು ಮಾರ್ಗದರ್ಶನ ಸದಾ ಇರಬೇಕೆಂದರು.

promotions

Read More Articles