ಸಚಿವ ಸಂಪುಟ ವಿಸ್ತರಣೆ ಕುರಿತು ಬಹಿರಂಗವಾಗಿ ಏನು ಹೇಳಲ್ಲ; ಅರುಣ ಸಿಂಗ್

  • 15 Jan 2024 , 4:21 AM
  • Belagavi
  • 116

ಬೆಳಗಾವಿ: ಕರ್ನಾಟಕ ರಾಜ್ಯದ ಭಾರತೀಯ ಜನತಾ ಪಕ್ಷದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಬಹಿರಂಗವಾಗಿ ಏನು ಹೇಳಲಾಗದು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ತಿಳಿಸಿದರು. ಬೆಳಗಾವಿಯ ಉಮೇಶ ಕತ್ತಿ ಒಡೆತನದ Uk-27 ಹೋಟೆಲ್ ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರದ ಸಾಧನೆಯನ್ನು ಪಕ್ಷದ ಕಾರ್ಯಕರ್ತರಿಗೆ ತಲುಪಿಸಲು ಸಭೆ

ಕರೆಯಲಾಗಿದೆ ಪಕ್ಷದ ದೃಷ್ಟಿಯಿಂದ ಕರ್ನಾಟಕ ಮಹತ್ವದಾಗಿದೆ. ಪ್ರಮುಖವಾಗಿ ಸಚಿವ ಸಂಪುಟ ವಿಸ್ತರಣೆ ಕುರಿತು ಸಿಎಂ ಯಡಿಯೂರಪ್ಪ ಜತೆಗೆ ಚರ್ಚೆ ಮಾಡಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವದು. ವರಿಷ್ಠರಿಂದ ತಂದಿರೋ ಸಂದೇಶದ ಬಗ್ಗೆ ಕೋರ್ ಕಮಿಟಿಯಲ್ಲಿ ಚರ್ಚೆ ಬಹಿರಂಗವಾಗಿ ಹೇಳಲು ಆಗುವುದಿಲ್ಲ ಎಂದರು.

Read All News