ಭಾರತ ಬಂದಗೆ ಬೆಂಬಲ ವ್ಯಕ್ತಪಡಿಸಿದ ಕಾಂಗ್ರೆಸ್ ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳು

  • 15 Jan 2024 , 1:16 AM
  • Delhi
  • 137

ನವದೆಹಲಿ: ರೈತರ ಹೋರಾಟಕ್ಕೆ ರಾಷ್ಟ್ರೀಯ ಜನತಾದಳ (ಆರ್‌ಜೆಡಿ),ತೃಣಮೂಲ ಕಾಂಗ್ರೆಸ್ ಮತ್ತು ಎಡಪಕ್ಷಗಳು, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗಳು ದೇಶಾದ್ಯಂತ ನಡೆಯಲಿರುವ ಮುಷ್ಕರಕ್ಕೆ ತಮ್ಮ ಬೆಂಬಲವನ್ನು ಘೋಷಿಸಿವೆ.

ಡಿಸೆಂಬರ್ 8ಕ್ಕೆ ಬಂದ್ ಗೆ ಕರೆ ನೀಡಿದ್ದು, ಕಾಂಗ್ರೆಸ್ ಪಕ್ಷ ಸಂಪೂರ್ಣ ಬಂದ್ ಗೆ ಬೆಂಬಲ ನೀಡಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ. ಈ ಬಂದ್​ಗೆ ದೇಶದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಜೆಪಿಯೇತರ ಸರ್ಕಾರಗಳು, ಎಡ ಸಂಘಟನೆಗಳು ಮತ್ತು ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ

Read All News