ಬೆಳಗಾವಿ: ಮಾಜಿ ಮುಖ್ಯ ಮಂತ್ರಿ ದಿವಂಗತ ಎಸ್. ಆರ್. ಕಂಠಿ ಅವರ ಪತ್ನಿ ಮರಿಬಸಮ್ಮ ಎಸ್. ಕಂಠಿ (104) ಅವರು ಮಂಗಳವಾರ ನಿಧನರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಸ್ಥಾಪಿಸಿರುವ ಸೈನಿಕ ಶಾಲೆಯಲ್ಲಿ ಮಗನೊಂದಿಗೆ ಮರಿಬಸಮ್ಮ ಕಂಠಿ ವಾಸವಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.