ಬೆಂಗಳೂರು: ಕೊರೊನಾ ಅಟ್ಟಹಾಸ ಇಳಿಮುಖ ಆಗ್ತಾಯಿದೆ ಅನ್ನೋದರಲ್ಲಿ ಅದರ ಮತ್ತೊಂದು ರೂಪಾಂತರ ವೈರಸ್ ಹುಟ್ಟಿದ್ದು ಜಗತ್ತೆನ್ನೆ ಬೆಚ್ಚಿಬೀಳಿಸಿದೆ. ಈಗಾಗಲೇ ಕೆಲವು ದೇಶಗಳಲ್ಲಿ ಇದರ ಆತಂಕ ಹೆಚ್ಚಾಗಿದ್ದು ಇದರ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ನೈಟ್ ಕರ್ಪ್ಯೂ ಜಾರಿಯಾಗಲಿದ್ದು, ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಈ ಕರ್ಪ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಇದು ಇಂದಿನಿಂದ 9 ದಿನಗಳ ಕಾಲ ಜಾರಿ ಇರಲಿದ್ದು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶವಿದೆ. ಜನವರಿ 2 ವರೆಗೆ ಇರುವ ಕರ್ಪ್ಯೂ ಹೊಸ ವರ್ಷ ಆಚರಣೆಗೆ ಕಡಿವಾಣ ಬೀಳಲಿದೆ. ರಾತ್ರಿ 9 ರನಂತರ ಬಸ್ ಸಂಚಾರ ಇರೋದಿಲ್ಲ. ಹೋಟೆಲ್, ರೆಸ್ಟೋರೆಂಟ್‌ಗಳೂ ಬಂದ್ ಆಗಲಿವೆ. ವ್ಯಾಪಾರ, ವಹಿವಾಟಗಳೂ ನಡೆಯುವುದಿಲ್ಲ. ಅಗತ್ಯ ವಸ್ತುಗಳ ಸರಬರಾಜು ಮಾಡುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಇರಲಿದೆ. ಇದರ ಕುರಿತು ಇಂದು ಸಂಜೆ 5 ಗಂಟೆಯೊಳಗೆ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ತಿಳಿದು ಬಂದಿದೆ.