ಬೆಂಗಳೂರಿನಲ್ಲಿ ಸಿಡಿದ್ದೆದ್ದ ಸಾಹಸಿಂಹನ ಅಭಿಮಾನಿ ಬಳಗ

  • 7 Jan 2024 , 4:49 AM
  • Bengaluru
  • 107

ಬೆಂಗಳೂರು: ಸ್ಯಾಂಡಲ್ ವುಡ್ ಹೆಸರಾಂತ ನಟ ದಿವಂಗತ ಡಾ.ವಿಷ್ಣುವರ್ಧನ್ ಅವರ ಪುತ್ಥಳಿ ಧ್ವಂಸಗೊಳಿಸಿದ್ದಕ್ಕೆ ಅವರ ಅಭಿಮಾನಿಗಳು ಮೈಸೂರಲ್ಲಿ ಬೀದಿಗಿಳಿದು ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ರಾತ್ರಿ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ವಿಷ್ಣು ಪುತ್ಥಳಿಯನ್ನು ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ. ಇದರಿಂದ ವಿಷ್ಣು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಹಿನ್ನಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ಜಗನ್ಮೋಹನ ಅರಮನೆ ಮುಂಭಾಗ ಪ್ರತಿಭಟನೆ ನಡೆಸಿದ ಅಭಿಮಾನಿ ಬಳಗ, ಕಿಡಿಗೇಡಿಗಳ ಕೃತ್ಯದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪದೇಪದೆ ವಿಷ್ಣುವರ್ಧನ್ ವಿಚಾರದಲ್ಲಿ ನೋವುಂಟು ಮಾಡುತ್ತಿರುವುದು ಸರಿಯಲ್ಲ. ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿಷ್ಣು ಪುತ್ಥಳಿಗಳಿಗೆ ಭದ್ರತೆ ಒದಗಿಸಬೇಕು.

ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ವಿಷ್ಣು ಅವರಿಗೆ ಅಪಮಾನ ಆಗಬಾರದು ಎಂದು ಆಗ್ರಹಿಸಿದರು. ಜತೆಗೆ ಈ ಕೃತ್ಯ ಎಸಗಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಮನವಿ ಮಾಡಿದರು.

Read All News