ಚೆನ್ನೈ :ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರ ಮಗ ರಾಮ್ ಚರಣ್ ತೇಜ ಅವರಿಗೆ ಕೊರೋನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. ಈ ಬಗ್ಗೆ ಸ್ವತ ಅವರೇ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ. ತನಗೆ ಕೋವಿಡ್ ಪಾಸಿಟಿವ್ ಎಂದು ರಾಮ್ ಚರಣ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಆದರೆ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ.
Request all that have been around me in the past couple of days to get tested.
— Ram Charan (@AlwaysRamCharan) December 29, 2020
More updates on my recovery soon. pic.twitter.com/lkZ86Z8lTF
ಸದ್ಯ ಹೋಂ ಕ್ವಾರಂಟೈನ್ ಆಗಿದ್ದೇನೆ. ಬೇಗ ಗುಣಮುಖನಾಗಿ ಹೊರ ಬರುತ್ತೇನೆ ಹಾಗೂ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತಿರುತ್ತೇನೆ ಎಂದು ಮನವಿ ಮಾಡಿದ್ದಾರೆ. ಇನ್ನು ಅವರು ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿ ಆಗಿದ್ದರು. ಈಗ ರಾಮ್ ಚರಣ್ ಅವರಿಗೆ ಪಾಸಿಟಿವ್ ಬಂದ ಕಾರಣದಿಂದ ಚಿತ್ರೀಕರಣ ಮುಂದಕ್ಕೆ ಹೋಗುವ ಸಾಧ್ಯತೆ ಇದೆ.