ರಾಜ್ಯಕ್ಕೂ ಕಾಲಿಟ್ಟ ಬ್ರಿಟನ್ ರೂಪಾಂತರಿ ಕೊರೊನಾ

  • 15 Jan 2024 , 3:18 AM
  • Bengaluru
  • 134

ಬೆಂಗಳೂರು: ದೇಶದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿರುವ ಬ್ರಿಟನಿನ ರೂಪಾಂತರಿ ಕೊರೊನಾ  ವೈರಸ್ ಬೆಂಗಳೂರು ನಗರಕ್ಕೂ ಕಾಲಿಟ್ಟಿದೆ.  ಬೆಂಗಳೂರಿನ ಮೂವರಿಗೆ ರೂಪಾಂತರಿ ಕೊರೊನಾ  ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು,

ಬ್ರಿಟನ್ ನಿಂದ ಭಾರತಕ್ಕೆ ಬಂದ 6 ಮಂದಿಯಲ್ಲಿ ರೂಪಾಂತರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, ಈ ಪೈಕಿ ಹೈದರಾಬಾದ್ ನ ಇಬ್ಬರು, ಪುಣೆಯ ಒಬ್ಬರು ಹಾಗೂ ಬೆಂಗಳೂರಿನ ಮೂವರಿಗೆ ರೂಪಾಂತರಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇಂದು ಸಂಜೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Read All News