ಬೆಳಗಾವಿ ಜಿಲ್ಲೆಯ ವಿಭಜನೆಗೆ ಮತ್ತೆ ಕೇಳಿ ಬಂದ ಕೂಗು; ಶೀಘ್ರ ಸಿಎಂ ಭೇಟಿ ಮಾಡಿ ಚರ್ಚೆ ಮಾಡೋಣ ಎಂದ ಸಾಹುಕಾರ ರಮೇಶ

  • 15 Jan 2024 , 2:21 AM
  • Belagavi
  • 132

ಬೆಳಗಾವಿ: ಜಿಲ್ಲೆಯ ವಿಭಜನೆಗೆ ಮತ್ತೆ ಬೆಳಗಾವಿಯಲ್ಲಿ ಕೂಗು ಕೇಳಿ ಬಂದಿದೆ ಇಂದು ಗೋಕಾಕ ಪಟ್ಟಣದಲ್ಲಿ ಸಚಿವ ರಮೇಶ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ ಗೋಕಾಕ್ ಜಿಲ್ಲಾ ಹೋರಾಟ ಸಮಿತಿ ಪದಾಧಿಕಾರಿಗಳು ಗೋಕಾಕನ್ನು ಜಿಲ್ಲೆ ಮಾಡುವಂತೆ ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ರಮೇಶ ಈ ಹಿಂದೆ ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆಯಲ್ಲಿ ಗೋಕಾಕ್ ಹಾಗೂ ಚಿಕ್ಕೋಡಿ ಜಿಲ್ಲೆ ರಚನೆ ಬಗ್ಗೆ ನಿರ್ಣಯ ಮಾಡಲಾಗಿತ್ತು ಆದರೆ ಬೈಲಹೊಂಗಲದವರು ನಮಗೂ ಪ್ರತ್ಯೇಕ ಜಿಲ್ಲೆ ಕೊಡಿ ಅಂತ ಕೇಳಿದ್ದರಿಂದ ಹಾಗೂ, ಕೋವಿಡ್ ಸೇರಿದಂತೆ ಕೆಲ ತಾಂತ್ರಿಕ ಕಾರಣಗಳಿಂದ ಈ ವಿಚಾರ ನಿಂತಿದೆ.

ಬಜೆಟ್ ಅಧಿವೇಶನ ಮುಗಿದ ತಕ್ಷಣ ಎಲ್ಲರೂ ಸೇರಿ ಮುಖ್ಯಮಂತ್ರಿಗಳನ್ನು ಭೇಟಿ ಆಗಿ ಅವರ ಜೊತೆ ಚರ್ಚೆ ಮಾಡೋಣ ಎಂದು ಸಚಿವ ರಮೇಶ ಜಾರಕಿಹೊಳಿ ಹೋರಾಟಗಾರರಿಗೆ ಭರವಸೆ ನೀಡಿದ್ದಾರೆ.

Read All News