ಬೈಲಹೊಂಗಲ: ತಾಲೂಕಿನ ಮರಡಿ ನಾಗಲಾಪುರ ಗ್ರಾಮದಲ್ಲಿ ಶುಕ್ರವಾರದಂದು ನೂತನ ಶ್ರೀ ಭೀರಲಿಂಗೇಶ್ವರ ದೇವಾಲಯದ ಕಟ್ಟಡ ನಿರ್ಮಾಣದ ತಳಪಾಯ ತುಂಬುವ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮಕ್ಕೆ ಇಂಚಲ ಕ್ಷೇತ್ರದ ಶ್ರೀ ಶಿವಾನಂದ ಭಾರತಿ ಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ಬೈಲಹೊಂಗಲ ಪಿ ಎಸ್ ಐ ಈರಣ್ಣ ರಿತ್ತಿ, ಮಾಜಿ ಜಿ.ಪಂ ಸದಸ್ಯ ಬಾಬಾಸಾಹೇಬ ಪಾಟೀಲ, ಚಿಕ್ಕಹಟ್ಟಿಹೊಳಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯ ಅಧ್ಯಕ್ಷ ನಿಂಗನಗೌಡ ಪಾಟೀಲ, ಬೀರಪ್ಪ ದೇಶನೂರ ಹಾಗೂ ಗ್ರಾಮಸ್ಥರು ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.