ವಾಷಿಂಗ್ಟನ್: ಯು.ಎಸ್.ಕ್ಯಾಪಿಟಲ್’ನಲ್ಲಿ ನಡೆದ ದಾಂದಲೆಗೆ ಮತ್ತಷ್ಟು ಪ್ರಚೋದನೆ ನೀಡುವ ರೀತಿಯಲ್ಲಿ ಟ್ರಂಪ್ ಟ್ವೀಟ್ ಗಳಿದ್ದ ಕಾರಣ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಖಾತೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಟ್ವಿಟರ್ ತಿಳಿಸಿದೆ.
After close review of recent Tweets from the @realDonaldTrump account and the context around them we have permanently suspended the account due to the risk of further incitement of violence.https://t.co/CBpE1I6j8Y
— Twitter Safety (@TwitterSafety) January 8, 2021
ಡೊನಾಲ್ಡ್ ಟ್ರಂಪ್ ಅವರ ಖಾತೆಯಿಂದ ಇತ್ತೀಚೆಗೆ ಮಾಡಲಾದ ಟ್ವೀಟ್‌ಗಳನ್ನು ಮತ್ತು ಸನ್ನಿವೇಶಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ ಬಳಿಕ ಗಲಭೆಗೆ ಮತ್ತಷ್ಟು ಪ್ರಚೋಧನೆ ನೀಡುವ ಅಪಾಯವಿದೆ ಎಂದು ಪರಿಗಣಿಸಿ ಅವರ ಖಾತೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಲಾಗಿದೆ.