ನವದೆಹಲಿ: ಜನವರಿ 16ರಿಂದ ಮೊದಲ ಹಂತದ ಕೋವಿಡ್-19 ಲಸಿಕೆ ನೀಡುವ ಅಭಿಯಾನ ಪ್ರಾರಂಭವಾಗಲಿದ್ದು ಈಗಾಗಲೇ ಎರೆಡು ವ್ಯಾಕ್ಸೀನ್ ಮೇಡ್ ಇನ್ ಇಂಡಿಯಾ ಆಗಿವೆ ಹಾಗೂ ಇನ್ನು 4 ವ್ಯಾಕ್ಸೀನ್ ಪ್ರೋಗ್ರೆಸ್ ನಲ್ಲಿದ್ದು ಜೊತೆಗೆ ಇನ್ನು ವ್ಯಾಕ್ಸಿನ್ ಬರುವ ಸಂಭಾವನೆ ಕೂಡ ಇದೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Speaking at the interaction with CMs on vaccination rollout. https://t.co/gbWZ4LsQGB
— Narendra Modi (@narendramodi) January 11, 2021
ಕೋವಿಡ್-19 ಲಸಿಕೆ ಕುರಿತಂತೆ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಂವಾದ ಸಭೆಯನ್ನುದ್ದೇಶಿಸಿ ಇಂದು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಮೇಡ್ ಇನ್ ಇಂಡಿಯಾ ಲಸಿಕೆಯನ್ನು ನೀಡಲು ಅನುಮತಿ ಸಿಕ್ಕಿದ್ದು, ಮೊದಲ ಹಂತದಲ್ಲಿ 30 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಮೊದಲ ಹಂತದಲ್ಲಿ 3 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು, ಎರಡನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟವರು ಹಾಗೂ ಆರೋಗ್ಯ ಸಮಸ್ಯೆ ಇರುವ 50 ವರ್ಷದ ಒಳಗಿನವರು ಲಸಿಕೆ ಪಡೆಯಲಿದ್ದಾರೆ ಎಂದು ಹೇಳಿದರು. ಕಳೆದ 8 -9 ತಿಂಗಳಲ್ಲಿ ಇದ್ದ ಭಯದಿಂದ ಜನರು ಇವಾಗ ಹೊರಗೆ ಬಂದಿದ್ದಾರೆ ಇದು ಒಳ್ಳೆಯ ಸ್ಥಿತಿ ಆದರೆ ಇದನ್ನು ಕೆರಲೇಸ್ ಮಾಡಬಾರದು.
ಕೇಂದ್ರ ಹಾಗೂ ರಾಜ್ಯಗಳು ಸೂಕ್ತ ಸಮನ್ವಯದೊಂದಿಗೆ ಕೋವಿಡ್-19 ವಿರುದ್ಧ ಹೋರಾಟ ನಡೆಸುವ ಮೂಲಕ ಅನನ್ಯ ಒಕ್ಕೂಟ ವ್ಯವಸ್ಥೆಯನ್ನು ಪ್ರದರ್ಶಿಸಿದೆ. ಮುಂದಿನ ಕೆಲ ತಿಂಗಳಲ್ಲಿ 30 ಕೋಟಿ ಜನರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡುವ ವೇಳೆ ರಾಜ್ಯ ಸರ್ಕಾರಗಳು ಲಸಿಕೆಗೆ ಯಾವುದೇ ರೀತಿಯಲ್ಲೂ ಹಣ ವ್ಯಯ ಮಾಡುವ ಅಗತ್ಯವಿಲ್ಲ ಲಸಿಕೆಯ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.