ನೇತಾಜಿ ಜನ್ಮ ದಿನಾಚರಣೆಯನ್ನು ಜನವರಿ 23 ರಂದು ಪರಾಕ್ರಮ ದಿವಾಸ್ ಎಂದು ಆಚರಿಸಲು ನಿರ್ಧರಿಸಿದ ಕೇಂದ್ರ ಸರ್ಕಾರ

  • 15 Jan 2024 , 1:57 AM
  • Westbengal
  • 111

ಕೊಲ್ಕತ್ತಾ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯನ್ನು ಜನವರಿ 23 ರಂದು ಪ್ರತಿ ವರ್ಷ 'ಪರಾಕ್ರಮ ದಿವಸ್' ಎಂದು ಆಚರಿಸಲಾಗುವುದು ಎಂದು ಭಾರತ ಸರ್ಕಾರ ನಿರ್ಧರಿಸಿದ್ದು ಈ ಬಗ್ಗೆ ಕೇಂದ್ರ ಸಂಸ್ಕೃತಿ ಸಚಿವಾಲಯ ಪ್ರಕಟಿಸಿದೆ.

“ರಾಷ್ಟ್ರಕ್ಕೆ ನೇತಾಜಿಯ ಅದಮ್ಯ ಮನೋಭಾವ ಮತ್ತು ನಿಸ್ವಾರ್ಥ ಸೇವೆಯನ್ನು ಗೌರವಿಸಲು ಮತ್ತು ನೆನಪಿಟ್ಟುಕೊಳ್ಳಲು ಪ್ರತಿ ವರ್ಷ ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು “ಪರಾಕ್ರಮದಿವಸ” ಎಂದು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

logintomyvoice

ಕೋಲ್ಕತ್ತಾದ ವಿಕ್ಟೋರಿಯಲ್ ಸ್ಮಾರಕದಲ್ಲಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಜನ್ಮದಿನಾಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಜನವರಿ 23 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ. ಈ ಹಿಂದೆ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯಂದು ರಾಷ್ಟ್ರೀಯ ರಜಾದಿನವನ್ನು ಘೋಷಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪತ್ರ ಬರೆದಿದ್ದರು.

Read All News