ಬೆಂಗಳೂರು: ಕೊರೋನಾ ಕಾರಣದಿಂದ ಶಾಲೆ, ಕಾಲೇಜುಗಳು ತಡವಾಗಿ ಆರಂಭವಾಗಿವೆ ಆದರೆ ಈ ಬಾರಿಯ ಬೇಸಿಗೆ ರಜೆಯನ್ನೂ ಬಳಸಿಕೊಂಡು ಮೇ ವರೆಗೆ ತರಗತಿಗಳನ್ನು ನಡೆಸುವ ಇಂಗಿತವನ್ನು ಸಚಿವ ಸುರೇಶ್ ಕುಮಾರ್ ವ್ಯಕ್ತಪಡಿಸಿದ್ದಾರೆ. ಇನ್ನು ನಾಲ್ಕು ತಿಂಗಳು ಉಳಿದಿದ್ದು. ಈ ಸಮಯವನ್ನು ಸಂಪೂರ್ಣವಾಗಿ ಓದಿಗೆ ಮೀಸಲಿಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.
ಜೂನ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ಈಗಾಗಲೇ ಸಾಕಷ್ಟು ಸಮಯವನ್ನು ರಜೆಯಲ್ಲಿ ಕಳೆದಿದ್ದೀರಿ. ಇನ್ನು ಉಳಿದ ಸಮಯ ಓದಿನಲ್ಲೇ ಕಳೆಯಿರಿ ಎಂದು ಸಚಿವ ಸುರೇಶಕುಮಾರ ವಿದ್ಯಾರ್ಥಿಗಳಿಗೆ ಹೇಳಿದ್ದಾರೆ.