ಬೆಳಗಾವಿ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಪ್ರಾಣ ಕಳೆದುಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಚಚಡಿ ಕ್ರಾಸ್ ಸಮೀಪ ನಡೆದಿದೆ.

ಘಟನೆಯಲ್ಲಿ ಮೃತಪಟ್ಟವರು ಬೆಳಗಾವಿ ನಗರದ ಸಹ್ಯಾದ್ರಿ ನಗರದವರು ಎಂದು ತಿಳಿದು ಬಂದಿದೆ. ಯರಗಟ್ಟಿಯಿಂದ ಬೆಳಗಾವಿಯತ್ತ ಬರುತ್ತಿದ್ದ ಕಾರಿಗೆ ಬೆಳಗಾವಿಯಿಂದ

ಯರಗಟ್ಟಿಗೆ ಹೊರಟಿದ್ದ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರು ನುಜ್ಜುಗುಜ್ಜಾಗಿದ್ದು ಕ್ರೇನ್ ಮೂಲಕ ಕಾರನ್ನು ಹೊರತೆಗೆವ ಕೆಲಸ ನಡೆದಿದೆ. ಸ್ಥಳಕ್ಕೆ ಮುರಗೋಡ ಪೊಲೀಸರು ಭೇಟಿ ನೀಡಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
