ಬೆಳಗಾವಿಯಲ್ಲಿ ಸೈನಿಕ ಶಾಲೆ‌ ಪ್ರಾರಂಭಿಸಲು ಸಚಿವ ರಮೇಶ್ ಜಾರಕಿಹೊಳಿ‌ ಒತ್ತಾಯ

  • 19 Dec 2023 , 3:22 AM
  • Delhi
  • 107

ನವದೆಹಲಿ :ಕೇಂದ್ರ ರಕ್ಷಣಾ ಸಚಿವ ಮತ್ತು ಭಾರತೀಯ ಜನತಾ ಪಾರ್ಟಿಯ ಮಾಜಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ರಾಜನಾಥ ಸಿಂಗ ಅವರನ್ನು ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಭೇಟಿ ಮಾಡಿ ಚರ್ಚೆ ನಡೆಸಿದರು.

ನಿನ್ನೆಯ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದಂತೆ ದೇಶದಾದ್ಯಂತ ಸೈನಿಕ ಶಾಲೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆಗೆ ಹರ್ಷ ವ್ಯಕ್ತಪಡಿಸಿದ ಸಚಿವ ರಮೇಶ್ ಜಾರಕಿಹೊಳಿ‌ ಕಿತ್ತೂರು ರಾಣಿಚೆನ್ನಮ್ಮ ಅವರ ಹೆಸರಿನಲ್ಲಿ ಹೆಣ್ಣುಮಕ್ಕಳಿಗೆಮತ್ತುಸಂಗೊಳ್ಳಿರಾಯಣ್ಣಹೆಸರಿನಲ್ಲಿಗಂಡು ಮಕ್ಕಳಿಗೆ ಬೆಳಗಾವಿ ಭಾಗದಲ್ಲಿ ಆದ್ಯತೆಯ ಮೇರೆಗೆ ಸೈನಿಕ ಶಾಲೆ ಪ್ರಾರಂಭಿಸಬೇಕೆಂದು ಕೇಂದ್ರ ರಕ್ಷಣಾ ಸಚಿವರಿಗೆ ಮನವಿ‌ ಮಾಡಿದರು.

ಈ ಕುರಿತು ಸನ್ಮಾನ್ಯ ಪ್ರಧಾನಮಂತ್ರಿಗಳಿಗೂಪತ್ರಬರೆದುಮನವಿಸಲ್ಲಿಸಲಾಗುವುದು ಎಂದು ಸಚಿವರಮೇಶ್ಜಾರಕಿಹೊಳಿ‌ ಹೇಳಿದರು.

Read All News