ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಮಹಾಂತೇಶ ಕವಟಗಿಮಠ

  • 15 Jan 2024 , 1:40 AM
  • Belagavi
  • 132
ಬೆಳಗಾವಿ: ಹೂವು ಬೆಳೆಗಾರರು, ಅಗಸರು, ಕ್ಷೌರಿಕರು, ನೇಕಾರರು, ಮೆಕ್ಕೆಜೋಳ ಬೆಳೆಗಾರರು ಪರಿಹಾರ ಕುರಿತು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಠಗಿಮಠ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಇಂದಿರಾ ನಗರ ಹತ್ತಿರ ಲೋಕೋಪಯೋಗಿ ಸಮುದಾಯ ಭವನದಲ್ಲಿ ಇಂದು ಅಧಿಕಾರಿಗಳ ಸಭೆ ನಡೆಸಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಕಳೆದ ಬಾರಿಯ ಪ್ರವಾಹದಲ್ಲಿ ಹಾನಿಗೊಳಗಾದ ಮನೆಗಳ ಕೂಡಲೆ ದಾಖಲಾತಿ ಒದಗಿಸಿ ಮಂಜೂರಾದ ಮನೆಗಳನ್ನು ಕಟ್ಟಿಸಿಕೊಳ್ಳಿ. ಲೋಪದೋಷಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಹೊಟೇಲ್ ಉದ್ಯಮದಲ್ಲಿ ಭಾರಿ ಹಾನಿ ಉಂಟಾಗಿದ್ದು ಈ ಬಗ್ಗೆ ಸರ್ಕಾರಕ್ಕೆ ತಿಳಿಸಲಾಗುವದು ಎಂದು ಹೇಳಿದರು ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Read All News