ಬೆಳಗಾವಿ ಡಿಸಿಸಿ ಬ್ಯಾಂಕ ಚುನಾವಣೆಲ್ಲಿ ಕಪ್ ನಮ್ದೆ ಎಂದ, ಈರಣ್ಣಾ ಕಡಾಡಿ
- 15 Jan 2024 , 3:08 AM
- Belagavi
- 88
ಬೆಳಗಾವಿ: ಅವಿರೋಧವಾಗಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿ ಮೊದಲ ಬಾರಿ ತವರಿಗೆ ಆಗಮಿಸಿದ ಈರಣ್ಣ ಕಡಾಡಿ ಅವರನ್ನು ಜಿಲ್ಲಾ ಬಿಜೆಪಿ ಕಾರ್ಯಕರ್ತರು, ಮುಖಂಡರು ಭವ್ಯ ಸ್ವಾಗತ ಕೋರಿದರು. ಚನ್ನಮ್ಮ ವೃತ್ತದಲ್ಲಿರುವ ಗಣೇಶ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಚನ್ನಮ್ಮಾ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಬಿಜೆಪಿ ಪಕ್ಷ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿ ರಾಜ್ಯಸಭೆಗೆ ಆಯ್ಕೆ ಮಾಡಿ ರಾಷ್ಟ್ರದ ಸರ್ವೋನ್ನತ ಹುದ್ದೆ ನೀಡಿದೆ. ಕಾರ್ಯಕರ್ತರು ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ಉತ್ತಮ ಕೊಂಡಿಯಾಗಿ ನಾನು ಕೆಲಸ ಮಾಡುತ್ತೇನೆ, ಹುದ್ದೆಯ ಬಗ್ಗೆ ರಾಜ್ಯ ಮತ್ತು ರಾಷ್ಟ್ರೀಯ ಕೋರ್ ಕಮೀಟಿ ನಿರ್ಧಾರ ಮಾಡುತ್ತದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ಕೆಳಹಂತದಲ್ಲಿ ಸಮರ್ಪಕವಾಗಿ ಉಪಯೋಗ ಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಸಹಕಾರಿ ಕ್ಷೇತ್ರ ಅದು ಕೇವಲ ರಾಜಕೀಯ ಪಕ್ಷಗಳಿಗೆ ಸಿಮೀತವಾದ ಕ್ಷೇತ್ರವಲ್ಲ. ಆದರೂ ಕೂಡ ಬಿಜೆಪಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲಿದೆ. ಮುಂದಿನ ಬಾರಿ ಬಿಜೆಪಿ ಅವರೇ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಲಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಎರಡು ಬಣಗಳಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಕಡಾಡಿ ನಮ್ಮಲ್ಲಿ ಯಾವುದೇ ಬಣಗಳು ಇಲ್ಲ. ಆ ರೀತಿಯ ತಪ್ಪು ಕಲ್ಪನೆಗಳು ಯಾಕೆ ಹೋಗುತ್ತಾವೊ ಗೊತ್ತಿಲ್ಲ. ಈಗಲೂ ಡಿಸಿಸಿ ಬ್ಯಾಂಕ್ ಬಿಜೆಪಿ ಪಕ್ಷದ ನೇತೃತ್ವದಲ್ಲಿ ನಡೆಯುತ್ತಿದೆ. ಮುಂದೆಯೂ ಬಿಜೆಪಿ ನೇತೃತ್ವದಲ್ಲಿಯೇ ಡಿಸಿಸಿ ಬ್ಯಾಂಕ್ ನಡೆಯಲಿದೆ ಎಂದು ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಈರಣ್ಣ ಕಡಾಡಿ ಹೇಳಿಕೆ ನೀಡಿದ್ದಾರೆ.