ಬೆಳಗಾವಿ : ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಅನ್ನದಾತರ ರೈಲು ತಡೆ ಪ್ರತಿಭಟನೆ ಹಿನ್ನೆಲೆ. ಬೆಳಗಾವಿ ರೈಲು ನಿಲ್ದಾಣ ಮುಂದೆ ಪ್ರತಿಭಟನೆ ನಡೆಸಿದ ರೈತರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು. ಕೇಂದ್ರ ಮಾಜಿ ಸಚಿವ ಬಾಬಾಗೌಡರನ್ನ ರೈಲ್ವೆ ನಿಲ್ದಾಣ ಪ್ರವೇಶಕ್ಕೆ ಅವಕಾಶ ನೀಡದ ಪೊಲೀಸರು. ರೈಲ್ವೆ ನಿಲ್ದಾಣ ಪ್ರವೇಶ ದ್ವಾರದಲ್ಲಿ ರೈತರ ತಡೆ ಹಿಡಿದರು.
ರೈಲು ನಿಲ್ದಾಣದ ಮುಂದಿನ ರಸ್ತೆಯಲ್ಲಿ ಪ್ರತಿಭಟನೆ ನಿರತ ಅನ್ನದಾತರು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿವೆ.
ಸಾಮಾನ್ಯರ ಬಾಯಿ ಮುಚ್ಚಿಸುವ ಕೆಲಸವನ್ನು ಸರ್ಕಾರಗಳು ಮಾಡುತ್ತಿವೆ. ಪತ್ರಿಕಾ ಸ್ವಾತಂತ್ರವನ್ನು ಸಹ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.