ದೆಹಲಿ :ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ನವದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಕೃಷ್ಣ, ಕಾವೇರಿ, ಮಹದಾಯಿ ಹಾಗೂ ಅಂತರರಾಜ್ಯ ಜಲ ವಿವಾದಗಳ ಕುರಿತ ಹಾಗೂ ಘನತೆವೆತ್ತ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಸ್ತಾವನೆಗಳ ಬಗ್ಗೆ ಕಾನೂನು ತಜ್ಞರು ಹಾಗೂ ತಾಂತ್ರಿಕ ಸಲಹೆಗಾರರೊಂದಿಗೆ ಸಭೆ ನಡೆಯಿತು.
ಈ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಸೀನಿಯರ್ ಅಡ್ವೋಕೇಟ್ ಮೋಹನ ಕಾತರಕಿ, ಅಡ್ವೋಕೇಟ್ ವಿ. ಎನ್. ರಘುಪತಿ, ನಿಶಾಂತ ಪಾಟೀಲ್, ರಾಜೇಶ್ವರ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನೀಲ್ ಕುಮಾರ್, ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.