ಸ್ಮಶಾನದಲ್ಲಿ ಜಾತ್ರೆಗೆ ಚಾಲನೆ ನೀಡಿದ ಶಾಸಕ‌ ಸತೀಶ

  • 28 Feb 2021 , 5:50 PM
  • Belagavi
  • 107

ಗೋಕಾಕ : ಮೌಢ್ಯಕ್ಕೆ ಸಡ್ಡು ಹೊಡೆದು ಸಮಾಜದಲ್ಲಿನ ಮೂಢನಂಬಿಕೆ ವಿರುದ್ಧ ಸಮರ ಸಾರುವ ಮೂಲಕ ಜನರಲ್ಲಿ ನಿರಂತರ ಜಾಗೃತಿ ಮೂಡಿಸುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು, ಈಗ ಮತ್ತೊಂದು ವಿನೂತನ ಕಾರ್ಯಕ್ರಮ ನಡೆಸಲು ಮುಂದಾಗಿದ್ದಾರೆ.

ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ನೇತೃತ್ವದಲ್ಲಿ ' ಸ್ಮಶಾನ ಜಾತ್ರೆ ' ಎಂಬ ವಿನೂತನ ಕಾರ್ಯಕ್ರಮವನ್ನು ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ಉತ್ಸಾಹಿ ಯುವಕರು ಸ್ಮಶಾನ ಜಾತ್ರೆ ಎಂಬ ಹೊಸ ಕಾನ್ಸೆಪ್ಟ್ ನಲ್ಲಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ನಾನು ಸಹ ಭಾಗವಹಿಸಲಿದ್ದೇನೆ ಎಂದಿದ್ದಾರೆ.

ಮೌಢ್ಯದ ವಿರುದ್ಧ ನಿರಂತರ ನಮ್ಮ ಹೋರಾಟ ನಡೆಸುತ್ತಿದ್ದೇವೆ. ಈಗ ಯುವಕರೇ ಮುಂದೆ ಬಂದು ಕಾರ್ಯಕ್ರಮ ನಡೆಸುತ್ತಿದ್ದಾರೆ. ಸ್ವಾಮೀಜಿಗಳು, ಸಾಹಿತಿಗಳು, ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಶಿಕ್ಷಣ ಹಾಗೂ ಮೌಢ್ಯದ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ' ಮೂಢನಂಬಿಕೆಗೆ ಮುಕ್ತಿ ಶಿಕ್ಷಣಕ್ಕೆ ಶಕ್ತಿ ' ಎಂಬ ಹೊಸ ಕಾನ್ಸೆಪ್ಟದೊಂದಿಗೆ ನಡೆಸಲಾಗುತ್ತಿದೆ. ಜೊತೆಗೆ ಸರ್ಕಾರದ ಸೌಲಭ್ಯಗಳ ಬಗ್ಗೆ, ಸಮಾಜದಲ್ಲಿ ಬದುಕುವ ರೀತಿಯ ಕುರಿತು ಜಾಗೃತಿಯೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

Read All News