ಬೆಳಗಾವಿ: ಇಂದು ನಗರದ ಚನ್ನಮ್ಮ ವೃತ್ತದಲ್ಲಿ ಗ್ಯಾಸ್ ಸೇರಿದಂತೆ ದಿನಸಿ ಪದಾರ್ಥಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಡುರಸ್ತೆಯಲ್ಲೇ ಕಟ್ಟಿಗೆಯಿಂದ ಓಲೆ ಹೊತ್ತಿಸಿ ಪ್ರತಿಭಟನೆ ಮಾಡಿದ ಕಾರ್ಯಕರ್ತರು ಖಾಲಿ ಸಿಲೆಂಡರ್ ಇಟ್ಟು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.