ಶಿಗ್ಗಾವಿ: ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ನೀಡಿದರು.
ಶಿಗ್ಗಾವಿ ತಾಲೂಕಿನ ಗುಡ್ಡದಚನ್ನಾಪುರ ಗ್ರಾಮದಲ್ಲಿ ನಿರ್ಮಿಸಲಾಗಿರುವ ಬಾಲಕಿಯರ ವಸತಿ ನಿಲಯದ ಹೆಚ್ಚುವರಿ ಕೊಠಡಿ ಹಾಗೂ ಕಾಲೇಜಿನ ಮಹಾವಿದ್ಯಾಲಯದ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಬಾಲಕರ ವಸತಿ ನಿಲಯದ ನೂತನ ಕಟ್ಟಡವನ್ನು ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.