ಲಲಿತಾ ನಾಯಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಆರೋಪಿಗಳ ವಿರುದ್ಧ ಉಗ್ರ ಕ್ರಮ ಕೈಗೊಳ್ಳುತ್ತೇವೆ- ಬೊಮ್ಮಾಯಿ

  • 15 Jan 2024 , 12:37 AM
  • Bengaluru
  • 122

ಬೆಂಗಳೂರು: ಮಾಜಿ ಸಚಿವರಾದ ಬಿ ಟಿ ಲಲಿತಾ ನಾಯಕ್ ಸೇರಿದಂತೆ ಕೆಲವರಿಗೆ ಬೆದರಿಕೆ ಪತ್ರ ಬರೆದಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆ ಬೆದರಿಕೆ ಪತ್ರ ಬರೆದವರ ವಿರುದ್ಧ ಉಗ್ರ ಕ್ರಮ‌ ಜರುಗಿಸುವುದಾಗಿ ತಿಳಿಸಿದರು.

ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಸಂಬಂಧ ಲಲಿತಾ ನಾಯಕ್ ಅವರು ದೂರು ಸಲ್ಲಿಸಿರುವುದು ಗೊತ್ತಾಗಿದೆ ಎಂದರು. ಲಲಿತಾ ನಾಯಕ್ ಅವರು ಹಿರಿಯ ಸಾಹಿತಿ, ಗೌರವಾನ್ವಿತ ವ್ಯಕ್ತಿ, ಮಾಜಿ ಸಚಿವರು.

ಅವರು ಬೆದರಿಕೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ಈ ಪ್ರಕರಣವನ್ನು ಸರ್ಕಾರಿ ಗಂಭೀರವಾಗಿ ಪರಿಗಣಿಸುತ್ತದೆ. ಸಂಪೂರ್ಣ ತನಿಖೆ ಮಾಡುತ್ತೇವೆ. ಇದರ ಹಿಂದೆ ಯಾರೇ ಇದ್ದರೂ ಉಗ್ರ ಕ್ರಮ ಜರುಗಿಸುತ್ತೇವೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Read All News