ಬೆಳಗಾವಿ:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಬೆಳಗಾವಿಗೆ ಆಗಮಿಸುತ್ತಿರುವುದನ್ನು ಮಾಜಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿಗರು ನಗರದ ಚನ್ನಮ್ಮ ವೃತ್ತದ ಹಾಗೂ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಆವರಣದಲ್ಲಿ ಆಕ್ರೋಶ ವ್ಯಕ್ತಪಡಿಸಿ, ಡಿಕೆ ಶಿವಕುಮಾರ ಬಂಧಿಸುವಂತೆ ಆಗ್ರಹಿಸಿದರು.
ಅಶ್ಲೀಲ್ ವಿಡಿಯೋ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ದಲಿತ, ಅಬಲೆಯ ಹೆಣ್ಣು ಮಗಳನ್ನು ಮುಂದಿಟ್ಟುಕೊಂಡು ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಕೂಡಲೇ ಕೀಳು ರಾಜಕೀಯ ಮಾಡುತ್ತಿರುವ ಡಿ.ಕೆ. ಶಿವಕುಮಾರ ಅವರನ್ನು ಕೂಡಲೇ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು.
ಮಾಜಿ ಸಚಿವ ರಮೇಶ ಜಾರಕಿಹೊಳಿ ಕಳೆದ 25 ವರ್ಷಗಳಿಂದ ಒಂದು ಕಪ್ಪು ಚುಕ್ಕೆ ಇಲ್ಲದೆ ರಾಜಕಾರಣ ಮಾಡಿದ್ದಾರೆ. ಆದರೆ ಅಶ್ಲೀಲ ಸಿಡಿಯ ಮೂಲ ಸೂತ್ರದಾರ ಡಿ.ಕೆ.ಶಿವಕುಮಾರ ಇಂಥ ಕೀಳು ರಾಜಕಾರಣ ಮಾಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.