ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಅವರ ಧರ್ಮಪತ್ನಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತಃ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಟ್ವೀಟ್ನಲ್ಲಿ ನಾನು ಮತ್ತು ನನ್ನ ಪತ್ನಿಗೆ ಕೋವಿಡ್ 19 ಸೋಂಕು ಪಾಸಿಟಿವ್ ಆಗಿದೆ.
My wife Chennamma and I have tested positive for COVID-19. We are self-isolating along with other family members.
— H D Devegowda (@H_D_Devegowda) March 31, 2021
I request all those who came in contact with us over the last few days to get themselves tested. I request party workers and well-wishers not to panic.
ನಮ್ಮ ಕುಟುಂಬದ ಸದಸ್ಯರೊಂದಿಗೆ ನಾವು ಐಸೋಲೇಟ್ಗೆ ಒಳಗಾಗುತ್ತಿದ್ದೇವೆ. ಕೆಲದಿನಗಳಿಂದ ನಮ್ಮ ಜೊತೆ ಸಂಪರ್ಕದಲ್ಲಿದ್ದವರು ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ. ಪಕ್ಷದ ಕಾರ್ಯಕರ್ತರಲ್ಲಿ ಆತಂಕಗೊಳ್ಳದಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ. ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ ಕೂಡ ಟ್ವೀಟ್ ಮಾಡಿದ್ದಾರೆ.