ಸುರೇಶ ಅಂಗಡಿ ಕಂಡ ಕನಸು ನನಸಾಗಲು ಬಿಜೆಪಿಗೆ ಮತ ನೀಡಿ: ಸಿಎಂ

  • 26 Dec 2023 , 1:33 PM
  • Belagavi
  • 90

ಬೆಳಗಾವಿ : ದಿ. ಸುರೇಶ್ ಅಂಗಡಿ ಅವರ ಕನಸು ನನಸು ಮಾಡುವ ಗುರಿಯಾಗಿ ಬಿಜೆಪಿ ಅಭ್ಯರ್ಥಿ ಗೆ ಮತ ನೀಡವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಬುಧವಾರ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ನಡೆದ "ಚುನಾವಣಾ ಪ್ರಚಾರಾರ್ಥ ಸಭೆ"ಯಲ್ಲಿ ಭಾಗವಹಿಸಿ ಮಾತನಾಡಿದರು. ಮೂಲಭೂತ ಸೌಕರ್ಯಗಳಿಂದ ಹಿಡಿದು ಜನನಾಯಕ ದಿ. ಸುರೇಶ್ ಅಂಗಡಿ ಅವರ ಕನಸಿನ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೊಳಿಸಿ ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಏಪ್ರಿಲ್ ೧೭ ರಂದು ನಡೆಯಲಿರುವ ಚುನಾವಣೆಯಲ್ಲಿ ಕಮಲದ ಗುರುತಿಗೆ ಮತ ನೀಡಿ ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರದ ಸಚಿವರಾದ ಜಗದೀಶ್ ಶೆಟ್ಟರ್, ಉಮೇಶ್ ಕತ್ತಿ, ಶ್ರೀಮಂತ ಪಾಟೀಲ, ಶಾಸಕರಾದ ಮಹಾದೇವಪ್ಪ ಯಾದವಾಡ, ಪಿ.ರಾಜೀವ್, ಬೆಳಗಾವಿ ಲೋಕಸಭಾ ಕ್ಷೇತ್ರದ ಪಕ್ಷದ ಪ್ರಮುಖರು, ಮುಖಂಡರು, ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.

Read All News