ಪಶ್ಚಿಮ ಬಂಗಾಳದಲ್ಲಿ ದೀದಿಗೆ ಪಾಠ ಕಲಿಸಲಿದ್ದಾರೆ: ಸಿ.ಟಿ.ರವಿ

  • 15 Jan 2024 , 12:41 AM
  • Belagavi
  • 95

ಬೆಳಗಾವಿ:ತಮಿಳುನಾಡಿನಲ್ಲಿ ಹಿಂದಿಗಿಂತ ಒಳ್ಳೆಯ ವಾತಾವರಣ ಇದೆ.ತಮಿಳುನಾಡು, ಪಾಂಡಿಚೇರಿಯಲ್ಲಿ ಮತ್ತೆ ಬಿಜೆಪಿಅಧಿಕಾರಕ್ಕೆ ಬರೋದು ಶತಸಿದ್ದ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದರು.

ಶುಕ್ರವಾರ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಮೆಟ್ರೋಮ್ಯಾನ್ ಶ್ರೀಧರ್ ನೇತೃತ್ವದಲ್ಲಿ ಬಿಜೆಪಿಗೆ ಉತ್ತಮ ವಾತಾವರಣವಿದೆ. ಪಶ್ಚಿಮ ಬಂಗಾಳದಲ್ಲಿ ‌ದೀದಿಗೆ ಟಾಟಾ ಹೇಳಲು ಜನ ಶುರು ಮಾಡಿದ್ದಾರೆ ಎಂದು ಹರಿಹಾಯ್ದರು.

ಜನವಿರೋಧಿ ಬಿಜೆಪಿ ಸರ್ಕಾರ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಯಿಸಿದ ಅವರು, ಕಾಂಗ್ರೆಸ್ ನವರ ದೃಷ್ಟಿಯಲ್ಲಿ ಎಲ್ಲರೂ ಭ್ರಷ್ಟಾಚಾರ ಮಾಡಬೇಕು. ಎಲ್ಲಾ ಹಗರಣಗಳು ಕಾಂಗ್ರೆಸ್ ಸರಕಾರದಲ್ಲಿ ನಡೆದಿದ್ದು.

ಕರ್ನಾಟಕದಲ್ಲಿ ಲೋಕಾಯುಕ್ತ ಮುಚ್ಚಿದ್ದು ಯಾರು? ಕರ್ನಾಟಕ ರಾಜ್ಯದ ಹಣ ಕೊಳ್ಳೆ ಹೊಡೆದರು, ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಆಗಿತ್ತು. ಸಿಎಎ ಅನುಷ್ಠಾನ ತಂದಿದ್ದನ್ನು ಕಾಂಗ್ರೆಸ್ ವಿರೋಧ ಮಾಡುತ್ತಿದೆ ಎಂದು ಕಾಂಗ್ರೆಸ್ ‌ವಿರುದ್ದ ಹರಿಹಾಯ್ದರು.

Read All News