ಸಾರಿಗೆ ಇಲಾಖೆ ಸಿಬ್ಬಂದಿಗಳಿಗೆ ಶೇ.15% ವೇತನ ಹೆಚ್ಚಳ: ಶ್ರೀರಾಮುಲು

  • Krishna Shinde
  • 14 Jan 2024 , 9:45 PM
  • Bengaluru
  • 154

ಬೆಂಗಳೂರು :ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಇಂದು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15% ವೇತನ ಹೆಚ್ಚಳ ಮಾಡೋಕೆ ನಿರ್ಧಾರ ಮಾಡಿದ್ದೇವೆ ಎಂದು ಸಾರಿಗೆ ಸಚಿವರಾದ ಶ್ರೀರಾಮುಲು ತಿಳಿಸಿದ್ದಾರೆ .

ಇದು ಬಹುದಿನಗಳ ಬೇಡಿಕೆಯಾಗಿದ್ದು, ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರುಗಳು, ಕಾರ್ಮಿಕ ಮುಖಂಡರುಗಳೊಡನೆ ನಿರಂತರ ಸಭೆಗಳ ನಂತರ ಈ ನಿರ್ಧಾರಕ್ಕೆ ಬರಲಾಗಿದೆ ಮತ್ತು ಮುಖ್ಯಮಂತ್ರಿಗಳು ಈ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಇಂದು ಈ ಕುರಿತು ಆದೇಶ ಆಗಲಿದೆ ಎಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಸರ್ಕಾರವು  ಶೇ.15% ವೇತನ‌ ಪರಿಷ್ಕರಣೆಯ ನಿರ್ಧಾರ ಕೈಗೊಂಡಿದೆ. 

ಸದಾ ಉತ್ತಮ ಜನಸೇವೆಗೆ ಹೆಸರು ಮಾಡಿರೋ ಸಿಬ್ಬಂದಿ, ತಾವು ನೀಡಿರುವ ಬಂದ್ ಕರೆ ಹಿಂಪಡೆದು ಎಂದಿನಂತೆ ಉತ್ತಮ ಸೇವೆಗಳನ್ನು ಯಾವುದೇ ವ್ಯತ್ಯಯ ಆಗದಂತೆ ಮುಂದುವರಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದು ಹೇಳಿದ್ದಾರೆ.

Read All News