ಬೆಳಗಾವಿಯ ಕುವೆಂಪು ನಗರದಲ್ಲಿ ಮತದಾನ ಮಾಡಿದ ಪ್ರಿಯಾಂಕಾ ಜಾರಕಿಹೊಳಿ

  • 16 Dec 2023 , 5:52 PM
  • Belagavi
  • 144

ಬೆಳಗಾವಿ : ಇಲ್ಲಿನ ಕುವೆಂಪು ನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆ ನಂ.06 ಕ್ಕೆ ತೆರಳಿ, ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಮತದಾನ ಮಾಡಿದರು. ಬಳಿಕ ಮಾತನಾಡಿ, ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ತಂದೆಯ ಪ್ರಚಾರ ನಡೆಸಲಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಗೆಲ್ಲುವ ವಿಶ್ವಾಸ ಇದೆ ಎಂದರು.

ಬೆಳಗ್ಗೆಯಿಂದ ಇಲ್ಲಿಯವರೆಗೂ ಮತದಾನ ಮಾಡಿದವರಿಗೆ ಧನ್ಯವಾದ ತಿಳಿಸಿದ ಅವರು, ಪ್ರಜಾಪ್ರಭುತ್ವ ಬಲಗೊಳಿಸುವ ನಿಟ್ಟಿನಲ್ಲಿ ತಮ್ಮ ಹಕ್ಕನ್ನು ಜನರು ಚಲಾಯಿಸಿದ್ದಾರೆ ಎಂದು ತಿಳಿಸಿದರು.

Read All News