ಗೋವಾದಲ್ಲಿಯೂ ಇಂದಿನಿಂದ ರಾತ್ರಿ ಕರ್ಫ್ಯೂ: ಸಿಎಂ ಸಾವಂತ್ ಘೋಷಣೆ

  • 15 Jan 2024 , 2:55 AM
  • Goa
  • 120

ಪಣಜಿ :ಗೋವಾ ರಾಜ್ಯದಲ್ಲಿ ಕೊರೋನಾ ಸೋಂಕು ಹರಡುತ್ತಿರುವುದನ್ನು ನಿಯಂತ್ರಿಸಲು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಬುಧವಾರ ಹಲವು ನಿರ್ಬಂಧಗಳನ್ನು ಜಾರಿಗೊಳಿಸಿದ್ದಾರೆ. ಬುಧವಾರರಿಂದಲೇ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಂಡಿದೆ.

ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಾವಂತ್, ರಾಜ್ಯದಲ್ಲಿ ಬುಧವಾರ ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಈ ವೇಳೆ ಅಗತ್ಯ ಸೇವೆಗಳಿಗೆ ಯಾವುದೇ ನಿರ್ಬಂಧವಿಲ್ಲ.

Read All News