ಬೆಳಗಾವಿ ಆಕ್ಸಿಜನ್ ಪ್ಲಾಂಟ್‌ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೇಟಿ

  • 14 Jan 2024 , 10:11 PM
  • Belagavi
  • 102

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಕಾಕತಿಯಲ್ಲಿರುವ 'ಬೆಳಗಾವಿ ಆಕ್ಸಿಜನ್ ಪ್ಲಾಂಟ್‌' ಗೆ ಶುಕ್ರವಾರ ಸಂಜೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪ್ಲಾಂಟ್ ನಲ್ಲಿನ ಆಕ್ಸಿಜನ್ ಸಿಲಿಂಡರ್ ಗಳ ಸಂಗ್ರಹಣೆ ಹಾಗೂ ಸಾಮರ್ಥ್ಯದ ಬಗ್ಗೆ ಪರಿಶೀಲನೆ ನಡೆಸಿದರು. ಪ್ಲಾಂಟ್ ಗೆ ಆಕ್ಸಿಜನ್ ಸರಬರಾಜು ಮಾಡುವ ಮೂಲಗಳ ಬಗ್ಗೆ ವಿಚಾರಿಸಿದರು.

logintomyvoice

ಇದೇ ಸಂದರ್ಭದಲ್ಲಿ ಸಹಾಯಕ ಔಷಧ ನಿಯಂತ್ರಕ ರಘುರಾಮ್ ಅವರೊಂದಿಗೆ ಸತೀಶ ಅವರು ಕೆಲಹೊತ್ತು ಚರ್ಚೆ ನಡೆಸಿದರು. ಕಾರ್ಖಾನೆಯಲ್ಲಿ ಅಗತ್ಯ ಪ್ರಮಾಣದ ಆಕ್ಸಿಜನ್ ಸಿಲಿಂಡರ್ ಸಂಗ್ರಹಣೆ ಮಾಡಿ, ಹಂಚಿಕೆ ಮಾಡುವಂತೆ ಸೂಚಿಸಿದರು. ಆಕ್ಸಿಜನ್ ಪೂರೈಕೆ ಮಾಡುವ ಸಂದರ್ಭದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಲು ಕೂಡ ತಿಳಿಸಿದರು. ಬೆಳಗಾವಿ ಆಕ್ಸಿಜನ್ ಪ್ಲಾಂಟ್ ನ ವೆಂಕಟೇಶ್ ಪಾಟೀಲ್, ಜಿಲ್ಲಾ ಪಂಚಾಯ್ತಿ ಸದಸ್ಯ ಸಿದ್ದು ಸುಣಗಾರ, ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಸಿದ್ದೀಕ್ ಅಂಕಲಗಿ ಹಾಗೂ ಕಾಕತಿ ಗ್ರಾಮ ಪಂಚಾಯ್ತಿ ಸದಸ್ಯರು ಉಪಸ್ಥಿತರಿದ್ದರು.

Read All News