ಬೆಳಗಾವಿ ಡಿಸಿ ಕಚೇರಿ ಮುಂದೆ ರೈತರ ಪ್ರತಿಭಟನೆ
- 15 Jan 2024 , 1:09 AM
- Belagavi
- 104
ಬೆಳಗಾವಿ: ಡಿಸಿ ಕಚೇರಿ ಎದುರು ರೈತರ ತೀವ್ರ ಪ್ರತಿಭಟನೆಗೆ ಮಾಡುತ್ತಿದ್ದಾರೆ ಕಳೆದ 10 ತಿಂಗಳಿಂದ ನೆರೆ ಸಂತ್ರಸ್ತರಿಗೆ ಪರಿಹಾರ ನೀಡದಕ್ಕೆ ವಿರೋಧಿಸಿ ಸಚಿವರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು ಪ್ರವಾಹದಿಂದ ಮನೆ ಬಿದ್ದರೂ ಪರಿಹಾರ ಸಿಕ್ಕಿಲ್ಲ, ಬೆಳೆ ಹಾನಿಯದ್ರು ರೈತರಿಗೆ ಪರಿಹಾರ ಸಿಕ್ಕಿಲ್ಲ ತಕ್ಷಣವೇ ಸಂತ್ರಸ್ತರಿಗೆ ಪರಿಹಾರ ನೀಡಲು ಅಗ್ರಹಿಸಿದ್ದಾರೆ ರೈತರಿಗೆ ಪರಿಹಾರ ಸಿಗದಿರುವ ಬಗ್ಗೆ ಜಿಲ್ಲಾಡಳಿತ ಗಮನಕ್ಕಿದೆ ನಿಜವಾದ ಫಲಾನುಭವಿಗಳಿಗೆ ಪರಿಹಾರ ಸಿಗುತ್ತಿಲ್ಲವೆಂದು ದಯವಿಟ್ಟು ಅದಷ್ಟು ಬೇಗ ಸರ್ಕಾರದಿಂದ ಸಂತ್ರಸ್ತರಿಗೆ ಪರಿಹಾರ ಕೊಡಿ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಮುಂದೆ ರೈತರು ತಮ್ಮ ಅಳಲನ್ನು ಹೇಳಿಕೊಂಡರು.
ಜಿಲ್ಲೆಯ ಕೃಷ್ಣಾ, ಘಟಪ್ರಭಾ, ಮಲಪ್ರಭಾ, ಹಿರಣ್ಯಕೇಶಿ ಹಾಗೂ ಬಳ್ಳಾರಿ ನಾಲಾ ಪ್ರವಾಹದಿಂದ ಬೆಳೆಗಳು ಕೊಚ್ಚಿ ಹೋಗಿವೆ. ಮನೆಗಳು ಹಾಗೂ ಬೆಳೆಗಳಿಗೆ ಹಾನಿಯಾಗಿದೆ. ಆದರೆ, ಕೇಂದ್ರ ಮತ್ತು ರಾಜ್ಯ ಸರಕಾರ ಸೂಕ್ತ ಪರಿಹಾರ ನೀಡಿಲ್ಲ . ಕಳೆದ 11 ತಿಂಗಳಿಂದ ನೆರೆ ಸಂತ್ರಸ್ತರ ನೆರವಿಗೆ ಬಾರದ ರಾಜ್ಯ ಸರ್ಕಾರ ಧೋರಣೆ ಖಂಡಿಸಿ ಪ್ರತಿಭಟನೆ ನಡಿಸಿದ್ದರು ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ರೈತರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಪೋಲಿಸರು ವರ್ತನೆಗೆ ರೈತ ಮುಖಂಡರು ಕಿಡಿ ಕಾಡಿದರು .