ದಾವಣಗೆರೆ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ತಮ್ಮದೇ ಪಕ್ಷದ ಸಚಿವರ ವಿರುದ್ದ ಹಾರಿಹಾಯ್ದಿದ್ದಾರೆ. ಸದ್ಯ ರಾಜ್ಯದಲ್ಲಿ ಬೆಡ್ ಸಿಗುತ್ತಿಲ್ಲ ಈ ಸ್ಥಿತಿ ನೋಡಿದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಸಚಿವರು ಕೆಲಸ ಮಾಡುವುದಾದರೆ ಮಾಡಲಿ ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ಹೋಗಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ಪ್ರಧಾನಮಂತ್ರಿ ನರೇಂದ್ರ ಮೋದಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಕೆಲ ಸಚಿವರು ತಮ್ಮ ಸ್ವಂತ ಕೆಲಸಗಳಿಗೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲಾ ಜನರ ಸೇವೆ ಮುಖ್ಯ ಎಂದು ಹೊನ್ನಾಳಿ ಶಾಸಕ ಹಾಗೂ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.