ಗೋಕಾಕ: "ಲಾಕ್ ಡೌನ್ ನಿರ್ಧಾರ ಒಳ್ಳೆಯದು. ಆದರೆ, ಆಕ್ಸಿಜನ್, ಲಸಿಕೆ ಪೂರೈಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತ್ಯಮ ಮಾಡುತ್ತಿರುವುದು ಸರಿಯಲ್ಲ" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ದಾರೆ.
ಗೋಕಾಕದ ಹಿಲ್ ಗಾರ್ಡನ್ ಗೃಹ ಕಚೇರಿಯಲ್ಲಿ ಮಾದ್ಯಮದರೊಂದಿಗೆ ಅವರು ಮಾತನಾಡಿ, ರಾಜ್ಯದಲ್ಲಿ ಆಕ್ಸಿಜನ್ ಕೊರತೆ ತಾಂಡವಾಡುತ್ತಿದೆ. ಆಸ್ಪತ್ರೆಗಳಿಗೆ ಬೇಕಾಗುವಷ್ಟೂ ಆಕ್ಸಿಜನ್ ಪೂರೈಕೆಯಾಗುತ್ತಿಲ್ಲ.
ಈ ಹಿನ್ನೆಲೆ ರೋಗಿಗಳನ್ನು ಚಿಕಿತ್ಸೆ ನೀಡಲು ವೈದ್ಯರಿಗೆ ಸಮಸ್ಯೆ ಉಂಟಾಗಿದೆ. ಆಸ್ಪತ್ರೆಗಳಲ್ಲಿ ಕೇವಲ 50 ರಷ್ಟು ಆಕ್ಸಿಜನ್ ಇದೆ, ಹೆಚ್ಚಿನ ಆಕ್ಸಿಜನ್ ಪೂರೈಸುವ ಉದ್ದೇಶದಿಂದ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ರಾಜ್ಯದಲ್ಲಿನ ಸಮಸ್ಯೆ ಬಗ್ಗೆ 25 ಸಂಸದರು ಕೇಂದ್ರದಲ್ಲಿ ಧ್ವನಿ ಎತ್ತಬೇಕಿದೆ.
ಕರ್ನಾಟಕದಲ್ಲಿ ಹೆಮ್ಮಾರಿ ವೈರಾಣು ತಾಂಡವಾಡುತ್ತಿದೆ, ಸಾಕಷ್ಟು ಜನರು ಸಂಕಷ್ಟಕ್ಕೆ ಸಿಲುಕ್ಕಿದ್ದಾರೆ. ಇವರ ಸಮಸ್ಯೆ ನೀಗಿಸಲು ಇಲ್ಲಿನ ಸಂಸದರು ಹೋರಾಟ ಮಾಡಬೇಕು. ಇವರು ಯಾವುದೇ ಹಂತದಲ್ಲಿ ಕೆಲಸ ಮಾಡುತ್ತಿಲ್ಲ, ಈ ಸಂಸದರು ಹೆಸರಿಗೆ ಮಾತ್ರ ಎಂದು ಸತೀಶ ಜಾರಕಿಹೊಳಿ ಕುಟುಕಿದ್ದಾರೆ.