ಆಕ್ಸಿಜನ್ ನೀಡುವಲ್ಲಿ ಸರಕಾರ ತಾರತಮ್ಯ ಮಾಡುತ್ತಿದೆ: ಶಾಸಕ ಸತೀಶ

  • 15 Jan 2024 , 2:33 AM
  • Belagavi
  • 123

ಬೆಳಗಾವಿ: ಆಕ್ಸಿಜನ್ ನೀಡುವಲ್ಲಿ ಸರಕಾರ ತಾರತಮ್ಯ ಮಾಡುತ್ತಿದೆ. ಬೆಳಗಾವಿ ಜಿಲ್ಲಾ‌ ಉಸ್ತುವಾರಿ ಸಚಿವರು ಪಕ್ಷಾತೀತವಾಗಿ ಎಲ್ಲರ ಸಭೆ ಕರೆಯಬೇಕು. ನಾವು ಸರಕಾರದೊಂದಿಗೆ ಸಹಕಾರ ಕೊಡಲು ಸಿದ್ದರಿದ್ದೇವೆ.

ಅವರು ತಕ್ಷಣ ಸಭೆ ಮಾಡಬೇಕು ಎಂದು ಶಾಸಕ‌ ಸತೀಶ ಜಾರಕಿಹೊಳಿ ಆಗ್ರಹಿಸಿದರು. ಅವರು ಸೋಮವಾರದಂದು ಜಿಲ್ಲಾಧಿಕಾರಿ ಕಚೇರಿ ಬಳಿ ಪತ್ರಕರ್ತರ ಜತೆ ಮಾತನಾಡಿದರು.

ಬೆಳಗಾವಿ ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್, ರೆಮಡಿಸಿವರ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ಹೆಚ್ಚಿಗೆ ಪೂರೈಕೆ ಮಾಡುವಂತೆ ಸೂಚನೆ‌ ನೀಡಿದ್ದು, ಅವರು ತಕ್ಷಣ ಸರಿಪಡಿಸುತ್ತಾರೆ ಎನ್ನುವ ವಿಶ್ವಾಸ ಇದೆ ಎಂದರು.

Read All News