ಬೆಂಗಳೂರು: ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಅಳವಡಿಕೆ ಹಾಗೂ ಅರವಳಿಕೆ ತಜ್ಞರ ನೇಮಕ ಮಾಡಿಕೊಳ್ಳಲಾಗುವುದು ಹಾಗೂ ಈ ಪ್ರಕ್ರಿಯೆಗೆ ಈಗಾಗಲೇ ಸೂಚಿಸಲಾಗಿದೆ ಎಂದು ಸಚಿವ ಸುಧಾಕರ ತಿಳಿಸಿದ್ದಾರೆ.
ಒಟ್ಟು 2,480 ವೈದ್ಯರ ನೇಮಕವೂ ಶೀಘ್ರ ಆಗಲಿದೆ. ಬೆಂಗಳೂರಿನ ಕೆ.ಆರ್.ಪುರ, ಹೊಸಕೋಟೆ, ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ, ಮೂಲಸೌಕರ್ಯವನ್ನು ಸಚಿವರು ಪರಿಶೀಲಿಸಿದ್ದಾರೆ.