ಕಬ್ಬು ಬೆಳೆಗಾರರ ಸಮಸ್ಯೆಗಳು ಹಾಗೂ ಕಾರ್ಮಿಕರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ

  • 15 Jan 2024 , 4:48 AM
  • Belagavi
  • 123
ಬೆಳಗಾವಿ: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ, ಸಕ್ಕರೆ ಕಾರ್ಖಾನೆಯ ಅಧಿಕಾರಿಗಳು, ಕಬ್ಬು ಬೆಳೆಗಾರರು, ಕಾರ್ಮಿಕ ಮತ್ತು ಸಕ್ಕರೆ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ, ಕಾರ್ಮಿಕ ಮತ್ತು ಸಕ್ಕರೆ ಖಾತೆ ಸಚಿವರಾದ ಶಿವರಾಮ್ ಹೆಬ್ಬಾರ್ ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರ ನೇತೃತ್ವದಲ್ಲಿ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಅಣ್ಣಾಸಾಹೇಬ ಜೊಲ್ಲೆ ಯವರು ಸಭೆ ನಡೆಸಿ ಸಕ್ಕರೆ ಕಾರ್ಖಾನೆಗಳು ರೈತರಿಗೆ ಪಾವತಿಸಬೇಕಾದ ಬಾಕಿ ಮೊತ್ತ, ಕಬ್ಬು ಬೆಳೆಗಾರರ ಸಮಸ್ಯೆಗಳು ಹಾಗೂ ಕಾರ್ಮಿಕರಿಗೆ ಸಂಬಂಧಿಸಿದ ವಿಚಾರಗಳ ಕುರಿತು ಸಮಗ್ರ ಚರ್ಚೆ ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಅಭಯ್ ಪಾಟೀಲ್, ಅನಿಲ್ ಬೆನಕೆ, ಜಿಲ್ಲಾಧಿಕಾರಿಗಳಾದ ಡಾ. ಎಸ್.ಬಿ ಬೊಮ್ಮನಹಳ್ಳಿ, ಜಿಲ್ಲಾ ಪಂಚಾಯತ್ ಸಿಇಒ ಡಾ. ರಾಜೇಂದ್ರ, ಅಪರ ಜಿಲ್ಲಾಧಿಕಾರಿಗಳಾದ ಅಶೋಕ್ ದುಡಗುಂಟಿ, ಕಾರ್ಮಿಕ ಮತ್ತು ಸಕ್ಕರೆ ಇಲಾಖೆಯ ಅಧಿಕಾರಿಗಳು, ಕಾರ್ಖಾನೆಯ ಅಧಿಕಾರಿಗಳು ಹಾಗೂ ಇತರೆ ಪ್ರಮುಖರು ಉಪಸ್ಥಿತರಿದ್ದರು

Read All News